ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ:- ಗಾಳಿ, ಮಳೆಯ ವೇಳೆ ವಿದ್ಯುತ್ ಅನಾಹುತ ತಪ್ಪಿಸಲು ಸೆಸ್ಕ್ ಸನ್ನದ್ದ
ವರ್ಗಾವಣೆ ನಿಯಮಗಳ ನಿಯಮ 9ರ ಅನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಸಾಮಾನ್ಯವಾಗಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಮತ್ತು ಮೇ ಮಾಹೆಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿರುತ್ತದೆ ಎಂದು ತಿಳಿಸಿರುವ ಸಚಿವರು 2025-26 ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಏಪ್ರಿಲ್ 17 ರಿಂದ ಮೇ 13ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…