ಮೈಸೂರು: ಬಿಜೆಪಿಯಿಂದ ಆಫರ್ ಬಂದಿತ್ತು. ಡಿಸಿಎಂ ಹುದ್ದೆ ಬೇಕೋ? ಜೈಲುವಾದ ಬೇಕೋ? ಎಂದು ದೆಹಲಿಯಿಂದ ಕರೆ ಮಾಡಿದ್ದರು. ಪಕ್ಷ ನಿಷ್ಠೆಗಾಗಿ ಜೈಲಿಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿಕೆಶಿ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಕೆಶಿ ಅವರನ್ನು ಬಿಜೆಪಿಯಲ್ಲಿ ಯಾರು ಕರೆದರು? ಯಾವಾಗ ಕರೆದರು? ಎಂದು ಪ್ರಶ್ನಿಸಿದರು.
ಇದನ್ನು ಓದಿ: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ
ಡಿಕೆಶಿ ಅವರನ್ನು ಬಿಜೆಪಿ ಯಾರು ಕರೆದರು ಎಂಬುದನ್ನು ಬಹಿರಂಗಪಡಿಸಲಿ. ಇಷ್ಟು ದಿನ ಸುಮ್ಮನಿದ್ದ ಡಿಕೆಶಿ ಈಗ ಅಧಿಕಾರ ಹಸ್ತಾಂತರ ಚರ್ಚೆ ಸಂದರ್ಭದಲ್ಲಿ ಈ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಅವರು ಕಾಂಗ್ರೆಸ್‌ಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲಾ ನವೆಂಬರ್ ಕ್ರಾಂತಿಯ ಬದಲಾವಣೆ. ಅಧಿಕಾರ ಹಸ್ತಾಂತರ ಸಮಯ ಬರುತ್ತಿದ್ದಾಗ ಹೇಳಿಕೆ ನೀಡುತ್ತಿದ್ದಾರೆ. ಇದು ಪಕ್ಕಾ ಮೆಸೇಜ್. ಇದು ಧಮ್ಕಿ. ನವೆಂಬರ್ ಕ್ರಾಂತಿ ಶುರುವಾಗುತ್ತದೆ ಎಂದು ಈಗ ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…