Mysore
26
scattered clouds
Light
Dark

ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸರ್ಕಾರದ ಸಚಿವರೆಲ್ಲಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಕಾಂಗ್ರೆಸ್‌ನವರು ಏನು ಸತ್ಯ ಹರಿಶ್ಚಂದ್ರರಾ ಎಂಬ ಡಾ.ಕೆ.ಸುಧಾಕರ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಪ ಅವರು ಮಾತಾಡುತ್ತಾರೆ. ಅವರು ಕಾಂಗ್ರೆಸ್‌ನಲ್ಲಿ ಇದ್ದವರಲ್ಲವಾ? ಅವರೇ ಕಾಂಗ್ರೆಸ್‌ ಬಗ್ಗೆ ಸರ್ಟಿಫಿಕೇಟ್‌ ಕೊಡಲಿ. ಕೋವಿಡ್‌ ಅಕ್ರಮ ಆರೋಪ ತನಿಖಾ ವರದಿಯಲ್ಲಿ ಏನೇನಿದೆ ನನಗೆ ಎಲ್ಲಾ ಗೊತ್ತು ಎಂದು ಸುಧಾಕರ್‌ಗೆ ತಿರುಗೇಟು ಕೊಟ್ಟಿದ್ದಾರೆ.