ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸರ್ಕಾರದ ಸಚಿವರೆಲ್ಲಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಕಾಂಗ್ರೆಸ್‌ನವರು ಏನು ಸತ್ಯ ಹರಿಶ್ಚಂದ್ರರಾ ಎಂಬ ಡಾ.ಕೆ.ಸುಧಾಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಪ ಅವರು ಮಾತಾಡುತ್ತಾರೆ. ಅವರು ಕಾಂಗ್ರೆಸ್‌ನಲ್ಲಿ ಇದ್ದವರಲ್ಲವಾ? ಅವರೇ ಕಾಂಗ್ರೆಸ್ ಬಗ್ಗೆ ಸರ್ಟಿಫಿಕೇಟ್ ಕೊಡಲಿ. ಕೋವಿಡ್ ಅಕ್ರಮ ಆರೋಪ ತನಿಖಾ ವರದಿಯಲ್ಲಿ ಏನೇನಿದೆ ನನಗೆ ಎಲ್ಲಾ ಗೊತ್ತು ಎಂದು ಸುಧಾಕರ್‌ಗೆ ತಿರುಗೇಟು ಕೊಟ್ಟಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…