ರಾಜ್ಯ

ನೃಪತುಂಗ ವಿವಿ ಘಟಿಕೋತ್ಸವದಲ್ಲಿ 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಕುಲಪತಿ ಶ್ರೀನಿವಾಸ್ ಎಸ್ ಬಳ್ಳಿ

ಬೆಂಗಳೂರು: 2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀನಿವಾಸ ಬಳ್ಳಿ ಅವರು ತಿಳಿಸಿದರು.

ಇಂದು (ಆಗಸ್ಟ್ 19) ನೃಪತುಂಗ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಲಪತಿಗಳು, ಘಟಿಕೋತ್ಸವದ ದಿನದಂದು ಸುಮಾರು 792 ವಿದ್ಯಾರ್ಧಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. 16 ಟಾರ‍್ಸ್ ವಿದ್ಯಾರ್ಥಿಗಳಿಗೆ ಬಂಗಾರದ ಪದಕ ನೀಡಲಾಗುವುದು. ಹಾಗೂ ಬಾಹ್ಯಾಕಾಶ ವಿಜ್ಞಾನ ಮತ್ತು ಚಂದ್ರಯಾನದಲ್ಲಿ ಅನುಪಮ ಕೊಡುಗೆಗಳನ್ನು ನೀಡಿರುವ ಇಸ್ರೋ ವಿಜ್ಞಾನಿ ಶ್ರೀಮತಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್ ಡಾ. ರಾಮಸ್ವಾಮಿ ಬಾಲಸುಬ್ರಮಣಿಯನ್ ಮತ್ತು ಇನ್ಫೋಸಿಸ್ ಸಪ್ತ ಸಂಸ್ಥಾಪಕರಲ್ಲಿ ಒಬ್ಬರಾದ ದಿನೇಶ ಕೆ. ಅವರುಗಳಿಗೆ ತಮ್ಮದೇ ಆದ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನ ಬಿ.ಎಸ್ಸಿ ಸ್ನಾತಕ ಪದವಿ ಪಡೆದ ನೃಪತುಂಗ ವಿಶ್ವವಿದ್ಯಾಲಯದ ಹರ್ಷಿತ ಬಿ.ಕೆ, ಲೋಕೇಶ್ವರಿ ಆರ್, 2020-22ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಸೌಮ್ಯ ಮೂರ್ತಿ, ಸಸ್ಯಶಾಸ್ತ್ರದಲ್ಲಿ ಕೃತಿಕ ಓಂಪ್ರಕಾಶ್, ಭೌತಶಾಸ್ತ್ರದಲ್ಲಿ ಕಾವ್ಯ ಎಸ್, ಜೈವಿಕ ತಂತ್ರಜ್ಞಾನದಲ್ಲಿ ದರ್ಶನ್ ಎಲ್, ಗಣಿತ ಶಾಸ್ತ್ರದಲ್ಲಿ ಮೇಘನ ಸಿ, ಪ್ರಾಣಿಶಾಸ್ತ್ರದಲ್ಲಿ ಶ್ರೀನಿಧಿ ಎಂ. ಭಟ್ ಅಲೇಕ್, ರಸಾಯನ ಶಾಸ್ತ್ರದಲ್ಲಿ ಚಂದನ ಎನ್, 2021-23ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಆಸಿಯಾ ರೆಹಮಾನ್, ಸಸ್ಯಶಾಸ್ತ್ರದಲ್ಲಿ ಬೆರ್ದಿನಾಪೈರೇಸ್, ಭೌತಶಾಸ್ತ್ರದಲ್ಲಿ ರಾಬರ್ಟ್ಸನ್. ಬಿ, ಜೈವಿಕ ತಂತ್ರಜ್ಞಾನದಲ್ಲಿ ವನಿತಾ ಟಿ, ಗಣಿತಶಾಸ್ತ್ರದಲ್ಲಿ ಹೇಮ ಎಂ, ಪ್ರಾಣಿಶಾಸ್ತ್ರದಲ್ಲಿ ಇಂಚರ ನಾರಾಯಣ ಹಾಗೂ ರಸಾಯನಶಾಸ್ತ್ರದಲ್ಲಿ ಸೃಷ್ಟಿ ಎಂ.ಎಸ್ ಇವರುಗಳಿಗೆ ಬಂಗಾರದ ಪದಕ ಪ್ರದಾನ ಮಾಡಲಾಗುವುದು.

ಘಟಿಕೋತ್ಸವದಲ್ಲಿ 2020-22ರ ಬ್ಯಾಚಿನ 169 ಮತ್ತು 2021-23 ಬ್ಯಾಚಿನ 169 ಹೀಗೆ ಒಟ್ಟು 338 ಸ್ನಾತಕೋತರ ಪದವೀಧರರಿಗೆ ಮತ್ತು 2020-23ರ 454 ಸ್ನಾತಕ ಪದವೀಧರರಿಗೆ ಮೊದಲ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಲಾಗುವುದು.

ಇದು ಬಿಎಸ್ಸಿ, ಬಿಸಿಎ ಮತ್ತು ಎಂಎಸ್ಸಿ ವಿಷಯಗಳ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನಗಳ ಪದವೀಧರರನ್ನು ಒಳಗೊಂಡಿದೆ.

ಪದವೀಧರರನ್ನು ಈಗಾಗಲೇ ನೋಂದಾಯಿಸಿಕೊಳ್ಳಲಾಗಿದ್ದು ನೋಂದಾಯಿತ ಪದವೀಧರರು, ಆಹ್ವಾನಿತರಿಗೆ ಮಾತ್ರ ಪ್ರವೇಶದ ಅವಕಾಶವಿದ್ದು, ಕಾರ್ಯಕ್ರಮದ ಮೊದಲ ಘಟಿಕೋತ್ಸವ ಮೆರವಣಿಗೆ ಜ್ಞಾನಜ್ಯೋತಿ ಸಭಾಂಗಣದ ಆವರಣದಲ್ಲಿ ಜರುಗುವುದು.

ಸಮಾರಂಭದ ಅಧ್ಯಕ್ಷತೆಯನ್ನು ನೃಪತುಂಗ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಕರ್ನಾಟಕ ರಾಜ್ಯ ಸರ್ಕಾರದ ಘನತವತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ವಹಿಸಲಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಾದ ಪ್ರೊ. ಎಂ. ಜಗದೀಶ್ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ.

ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ಮತ್ತು ನೃಪತುಂಗ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾದ ಶಿವನಂದ ಬ. ಕರಾಳೆ ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೋ.ಎ.ಸಿ. ಮಂಜುಳ ಅವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

6 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

6 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

6 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

7 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

7 hours ago