ರಾಜ್ಯ

ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಸಚಿವ ಎನ್.ಎಸ್‌ ಭೋಸರಾಜು

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯದಲ್ಲಿ ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನ ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಸೂಚನೆ ನೀಡಿದರು.

ಇಂದು (ಆಗಸ್ಟ್‌ 16) ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್‌ ಅರ್ಷದ್‌ ಅವರ ಜೊತೆಯಲ್ಲಿ ಜವಾಹರಲಾಲ್‌ ನೆಹರು ತಾರಾಲಯಕ್ಕೆ ಭೇಟಿ ನೀಡಿ ಸ್ಮಾರ್ಟ್‌ ಸಿಟಿ ಯೋಜನೆಯ ಅಡಿಯಲ್ಲಿ ನಡೆಸುತ್ತಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಜವಾಹರಲಾಲ್‌ ನೆಹರು ತಾರಾಲಯದಲ್ಲಿ ನಡೆಯುತ್ತಿರುವ ಯೋಜನೆಗಳು ಹಾಗೂ ಮುಂದಿನ ಪ್ರಸ್ತಾವನೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಪಡೆದರು.

ಸ್ಮಾರ್ಟ್‌ ಸಿಟಿ ಕಾಮಗಾರಿ ಪೂರ್ಣಗೊಳಿಸಲು ಗಡವು: ಸ್ಮಾರ್ಟ್‌ ಸಿಟಿ ಯೋಜನೆಯ ಅಡಿಯಲ್ಲಿ ಬಿಬಿಎಂಪಿ ವತಿಯಿಂದ ಜವಾಹರಲಾಲ್‌ ನೆಹರು ತಾರಾಲಯದ ಆವರಣದಲ್ಲಿ ಆಧುನಿಕ ಸಭಾಂಗಣ, ಕ್ಲಾಸ್‌ರೂಂ ಸೇರಿದಂತೆ ಹಲವು ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯನ್ನು ಸೆಪ್ಟೆಂಬರ್‌ 15 ರ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ, ಈ ಕಾಮಗಾರಿಯನ್ನ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಆಗಸ್ಟ್‌ 22 ರಂದು ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸುವಂತೆ ಸೂಚನೆ ನೀಡಿದರು.

ಜವಾಹರಲಾಲ್‌ ನೆಹರು ತಾರಾಲಯ ತಾಂತ್ರಿಕ ಆಧುನೀಕರಣ: ಜವಾಹರಲಾಲ್‌ ನೆಹರು ತಾರಾಲಯದಲ್ಲಿ ಪ್ರಸ್ತುತ ಇರುವಂತಹ ಅನಲಾಗ್‌ ಪ್ರೋಜೆಕ್ಟ್‌ರಗಳ ತಾಂತ್ರಿಕ ಉಪಕರಣಗಳು ಬಹಳ ಹಳೆಯ ತಂತ್ರಜ್ಞಾನದ್ದಾಗಿವೆ. ಇವುಗಳನ್ನ ಬದಲಿಸುವ ಮೂಲಕ ನೂತನ ತಂತ್ರಜ್ಞಾನದ ಎಲ್‌.ಇ.ಡಿ ಪ್ರೊಜೆಕ್ಟರ್‌ಗಳನ್ನ ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ತಾರಾಲಯದ ನಿರ್ದೇಶಕರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.

ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ಒದಗಿಸುವ ಟೆಂಡರ್‌ ಪ್ರಕ್ರಿಯೆ ಚಾಲ್ತಿಯಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಬಾರಿಯ ಆಯವ್ಯದಲ್ಲಿ 883 ವಸತಿ ಶಾಲೆಗಳಲ್ಲಿ ಟೆಲಿಸ್ಕೋಪ್‌ ಒದಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಿದ್ದಾರೆ.

ಈ ಟೆಲಿಸ್ಕೋಪ್‌ಗಳನ್ನ ಖರೀದಿಸಲು ಈಗಾಗಲೇ ಟೆಂಡರ್‌ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಆದಷ್ಟು ಶೀಘ್ರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ನಗರದ ಜವಾಹರ ನೆಹರು ತಾರಾಲಯದ ಸಹಯೋಗದಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು. ಆಯಾ ವಲಯವಾರು ತರಬೇತಿ ಶಿಬಿರಗಳಲ್ಲಿ ಟೆಲಿಸ್ಕೋಪ್‌ ಬಳಕೆ, ಅದರ ಮೂಲಕ ಅಧ್ಯಯನ ಮತ್ತು ಭೋಧನೆ ಹಾಗೂ ಅದನ್ನ ಸುಸ್ಥಿತಿಯಲ್ಲಿಡುವ ಬಗ್ಗೆ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್‌ ಅರ್ಷದ್‌, ಜವಾಹರಲಾಲ್‌ ನೆಹರು ತಾರಾಲಯದ ನಿರ್ದೇಶಕ ಡಾ. ಬಿ.ಆರ್‌ ಗುರುಪ್ರಸಾದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago