ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂಬ ನಿಲುವು ತಾಳಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಆರೋಪಿಗಳು ಹಾಗೂ ಅವರ ಕುಟುಂಬದವರು ಪರಿಪರಿಯಾಗಿ ಬೇಡಿಕೊಂಡರೂ ಕೂಡ ರಮ್ಯಾ ಅವರು ಮನಸ್ಸು ಬದಲಾಯಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಈ ಘಟನೆ ನಡೆದಿದೆ.
ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ನಟಿ ರಮ್ಯಾ ಅವರ ಮುಂದೆ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರಿಟ್ಟು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಆದರೂ ಕೂಡ ರಮ್ಯಾ ಅವರು ಆರೋಪಿಗಳನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ. ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಆರೋಪಿಗಳು ಕೋರ್ಟ್ ಆವರಣದಲ್ಲಿ ನಟಿ ರಮ್ಯಾ ಅವರ ಕಾಲಿಗೆ ಬಿದ್ದು, ‘ಇದೊಂದು ಬಾರಿ ಕ್ಷಮಿಸಿಬಿಡಿ, ನಮ್ಮಿಂದ ದೊಡ್ಡ ತಪ್ಪಾಗಿದೆ’ ಎಂದು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಕಳೆದ ವಿಚಾರಣೆಯ ವೇಳೆಯೂ ಆರೋಪಿಗಳು ಇದೇ ರೀತಿ ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಿಕೊಂಡಿದ್ದರು. ಈ ಬಾರಿ ಆರೋಪಿಗಳ ಕುಟುಂಬದವರೂ ಕೂಡ ರಮ್ಯಾ ಅವರ ಬಳಿ ಬಂದು ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸುವಂತೆ ವಿನಂತಿಸಿಕೊಂಡರು.
ಆದರೆ, ಆರೋಪಿಗಳ ಈ ಕ್ಷಮಾಪಣೆಯನ್ನು ಕಟ್ಟುನಿಟ್ಟಾಗಿ ತಿರಸ್ಕರಿಸಿರುವ ನಟಿ ರಮ್ಯಾ ತಮ್ಮ ನಿಲುವಿನಲ್ಲಿ ಕೊಂಚವೂ ಸಡಲಿಕೆ ತೋರಿಲ್ಲ. ‘ಕೈಯಲ್ಲಿ ಮೊಬೈಲ್ ಇದೆ, ಇಂಟರ್ನೆಟ್ ಸಿಗುತ್ತದೆ ಎಂಬ ಕಾರಣಕ್ಕೆ ಯಾರ ವಿರುದ್ಧ, ಹೇಗೆ ಬೇಕಾದರೂ ಅಶ್ಲೀಲವಾಗಿ ಕಾಮೆಂಟ್ ಹಾಕಬಹುದಾ? ನಾನು ಯಾವುದೇ ಕಾರಣಕ್ಕೂ ಈ ಕೇಸ್ ವಾಪಸ್ ಪಡೆಯುವುದಿಲ್ಲ’ ಎಂದು ರಮ್ಯಾ ಅವರು ಖಡಕ್ ಆಗಿ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾ ಟ್ರೋಲ್ ಹಾಗೂ ಸೈಬರ್ ದೌರ್ಜನ್ಯಗಳ ವಿರುದ್ಧ ಕಾನೂನು ಹೋರಾಟ ಮುಂದುವರಿಸಲು ನಿರ್ಧರಿಸಿರುವ ಅವರು, ‘ನ್ಯಾಯಾಲಯ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ನಾನು ಬರಲು ಸಿದ್ಧ. ಆದರೆ ಯಾರಿಗೂ ಕ್ಷಮೆ ನೀಡುವ ಪ್ರಶ್ನೆಯೇ ಇಲ್ಲ. ಇದೊಂದು ಘಟನೆ ಪ್ರತಿಯೊಬ್ಬರಿಗೂ ಸೂಕ್ತ ಪಾಠವಾಗಬೇಕು. ಮುಂದೆ ಇನ್ನೊಬ್ಬ ಹೆಣ್ಣುಮಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡುವ ಮುನ್ನ ಸಾವಿರ ಬಾರಿ ಯೋಚಿಸುವಂತಾಗಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…