ನವದೆಹಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಣೆ ಮಾಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಸಿ.ಟಿ.ರವಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್ ಪೀಠ, ಸಿ.ಟಿ.ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.