ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಇಂದು (ಜೂ.10) ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಎಸ್‌ಐಟಿ ಪೋಲಿಸರು ಪ್ರಜ್ವಲ್ ವಿಚಾರಣೆ ಮುಗಿದಿದ್ದು, ತಮ್ಮ ಕಸ್ಟಡಿಗೆ ಅವಶ್ಯಕತೆ ಇಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಈ ವೇಳೆ ಪ್ರಜ್ವಲ್ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಜ್ವಲ್‌ರನ್ನು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಅದೇಶ ಹೊರಡಿಸಿದರು.
ಈ ಮೂಲಕ ಇಷ್ಟು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಇಂದಿನಿಂದ(ಜೂ.10) ಪರಪ್ಪನ ಅಗ್ರಹಾರ ಜೈಲೇ ಗತಿ.