ರಾಜ್ಯ

ಲೈಂಗಿಕ ಪ್ರಕರಣ: ಪ್ರಜ್ವಲ್‌ಗೆ 14 ದಿನ ಜೈಲೇ ಗತಿ

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಇಂದು (ಜೂ.10) ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್‌ ರೇವಣ್ಣರನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಎಸ್‌ಐಟಿ ಪೋಲಿಸರು ಪ್ರಜ್ವಲ್‌ ವಿಚಾರಣೆ ಮುಗಿದಿದ್ದು, ತಮ್ಮ ಕಸ್ಟಡಿಗೆ ಅವಶ್ಯಕತೆ ಇಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಪ್ರಜ್ವಲ್‌ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಜ್ವಲ್‌ರನ್ನು ಜೂನ್‌ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಅದೇಶ ಹೊರಡಿಸಿದರು.

ಈ ಮೂಲಕ ಇಷ್ಟು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣಗೆ ಇಂದಿನಿಂದ(ಜೂ.10) ಪರಪ್ಪನ ಅಗ್ರಹಾರ ಜೈಲೇ ಗತಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

52 mins ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

1 hour ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

1 hour ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

1 hour ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

1 hour ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

2 hours ago