ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಕೇಂದ್ರ ವಿದೇಶಾಂಗ ಸಚಿವಾಲಯ ಬಿಗ್ ಶಾಕ್ ನೀಡಿದೆ.
ಕೇಂದ್ರ ವಿದೇಶಾಂಗ ಸಚಿವಾಲಯ ಇದೇ ಮೊದಲ ಬಾರಿಗೆ ವಿದೇಶದಲ್ಲಿರುವ ಪ್ರಜ್ವಲ್‌ಗೆ ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕಾರಣ ಕೇಳಿ ಇಂದು (ಮೇ.24) ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‍ಪೊರ್ಟ್ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು ಸಿಎಂ ಸಿದ್ದರಾಮಯ್ಯ ಎರಡು ಬಾರಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ನೀಡಿ, ಹತ್ತು ದಿನಗಳೊಳಗೆ ನೀವು ಶೋಕಾಸ್ ನೋಟಿಸ್‍ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.
ನೀವು ಶೋಕಾಸ್ ನೋಟಿಸ್‍ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ್ಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ. ಇದರಿಂದ ವಿದೇಶದಲ್ಲಿರುವ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಎದುರಾದಂತಗಿದೆ.
ವಿದೇಶಾಂಗ ವ್ಯವಹಾರಗಳ ಪಾಸ್‍ಪೋರ್ಟ್ ರದ್ದುಗೊಂಡರೆ ವಿಧಿ ಇಲ್ಲದೆ ಪ್ರಜ್ವಲ್ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಗಾಗಬೇಕಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಈಗಾಗಲೇ ಪ್ರಜ್ವಲ್‌ಗೆ ಮೂರು ಬಾರಿ ನೋಟಿಸ್ ಜಾರಿ ಮಾಡಿತ್ತು. ಜರ್ಮನಿಯಿಂದ ಬೆಂಗಳೂರಿಗೆ ಬರಲು ಮೂರು ಬಾರಿ ವಿಮಾನ ಟಿಕೆಟ್ ಬುಕ್ ಮಾಡಿ ಕೊನೆಕ್ಷಣದಲ್ಲಿ ಪ್ರಯಾಣ ರದ್ದುಪಡಿಸಿ ಎಸ್‌ಐಟಿಗೆ ತಲೆನೋವು ತಂದಿದ್ದರು. ಇದೀಗ ತನಿಖೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ಕಾನೂನು ಕ್ರಮದ ಮೂಲಕವೇ ಕ್ರಮ ಕೈಗೊಳ್ಳಲು ಎಸ್‌ಐಟಿ ಮುಂದಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…