Mysore
20
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಅಶ್ಲೀಲ ವಿಡಿಯೋ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗೆಳತಿಗೆ ಎಸ್‌ಐಟಿ ನೋಟಿಸ್

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್‌ಐಟಿ ವಶದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೋಟಿಸ್ ನೀಡಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚನೆ ಮಾಡಿದ ಬೆನ್ನಲ್ಲೇ ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದರು. ಇನ್ನು ವಿದೇಶದಲ್ಲಿ ತಲೆಮರೆಸಿಕೊಳ್ಳುವುದಕ್ಕೆ ಸಹಾಯ ಮಾಡಿರುವುದು ಆತನ ಗೆಳತಿ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಹಿನ್ನೆಲೆ ಪ್ರಜ್ವಲ್‌ ಗೆಳತಿಗೆ ಎಸ್‌ಐಟಿ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆಗಾಗಿ ಸರ್ಕಾರ ಎಸ್‍ಐಟಿ ರಚನೆ ಮಾಡಿದೆ. ಪ್ರಕರಣ ದಾಖಲಾದ ನಂತರ ಪ್ರಜ್ವಲ್‍ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಬಂದಿರಲಿಲ್ಲ. ಎರಡು ಬಾರಿ ವಿಮಾನದ ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ಪ್ರಜ್ವಲ್ ಅದನ್ನು ರದ್ದುಪಡಿಸಿದ್ದರು.

ತದನಂತರ ಮೇ 31ರಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ಬಂದಾಗ ಎಸ್‍ಐಟಿ ಅಧಿಕಾರಿಗಳು ವಿಮಾನನಿಲ್ದಾಣದಲ್ಲೇ ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ.

Tags:
error: Content is protected !!