ರಾಜ್ಯ

ಎತ್ತಿನಹೊಳೆ| ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಹೀಗಂದಿದ್ಯಾರು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಇಂದು ಚಾಲನೆ ನೀಡಿದ್ದಾರೆ. ಈ ವಿಚಾರವಾಗಿ ವ್ಯಂಗ್ಯವಾಡಿರುವ ವಿಪಕ್ಷ ನಾಯಕ ಆರ್.‌ ಅಶೋಕ್‌ ಎತ್ತಿನಹೊಳೆ ಕಾಂಗ್ರೆಸ್‌ ಸರ್ಕಾರದ ಮತ್ತೊಂದು ಬಂಡಲ್‌ ಬೊಗಳೆ ಎಂದು ಕೌಂಟರ್‌ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಆರ್.ಅಶೋಕ್‌, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ಇಂದು ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ, ನೈತಿಕವಾಗಿ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ಕುಟುಕಿದ್ದಾರೆ.

2010ರಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವರಾಗಿದ್ದ ಶ ಬಸವರಾಜ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆಯ ಪ್ರಸ್ತಾವನೆಯನ್ನು ಅಂದಿನ ಮುಖ್ಯಮಂತ್ರಿ ಯಡಿಯರಪ್ಪನವರ ಮುಂದಿಟ್ಟಾಗ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅದಕ್ಕೆ ತಾತ್ವಿಕ ಒಪ್ಪಿಗೆ ನೀಡಿತ್ತು. 2012 ಅಂದಿನ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡರು ಒಟ್ಟು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದರು. ಅಂದಿನ ಜನಸಂಪನ್ಮೂಲ ಸಚಿವರಾಗಿದ್ದ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದಿಂದ ಮತ್ತು ಇನ್ನಿತರ ಪ್ರಾಧಿಕಾರಗಳಿಂದ ಎಲ್ಲ ರೀತಿಯ ಅನುಮತಿ ಪಡೆಯಲು ಕಾರಣರಾದರು.

ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರ ವೇಳೆಗೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಮಾತು ಕೊಟ್ಟು, ಬಯಲು ಸೀಮೆ ಜನರಿಗೆ ಮೋಸ ಮಾಡಿದರು. ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಯೋಜನೆ ಪೂರ್ಣಗೊಳಿಸುವ ಬದ್ಧತೆ ತೋರಲೇ ಇಲ್ಲ.

ನಂತರ 2022-23ರ ಬಜೆಟ್ ನಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ 3,000 ಕೋಟಿ ರೂಪಾಯಿ ಅನುದಾನ ನೀಡಿ ಎತ್ತಿನಹೊಳೆ ಯೋಜನೆಗೆ ವೇಗ ನೀಡಿತ್ತು. 2014ರಲ್ಲಿ 8,500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ. ಇದಕ್ಕೆ ಯಾರು ಕಾರಣ? 2013ರಿಂದ ಈಗ 2024ರವರೆಗೆ ಒಟ್ಟು ಸುಮಾರು 7-8 ವರ್ಷ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು, ಸುಮಾರು ಆರೂವರೆ ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರು. ಈ ಯೋಜನೆ ಇಷ್ಟು ವಿಳಂಬವಾಗಲು ಯಾರು ಕಾರಣ? ಯೋಜನಾ ವೆಚ್ಚ ಆರಂಭಿಕ ಅಂದಾಜಿಗಿಂತ ಮೂರು ಪಟ್ಟು ಹೆಚ್ಚಾಗಲು ಕಾರಣ ಯಾರು? ಎಂದು ಆರ್.ಅಶೋಕ್‌ ಪ್ರಶ್ನಿಸಿದ್ದಾರೆ.

ಇಷ್ಟಾದರೂ ಬೆಟ್ಟ ಅಗೆದು ಇಲಿ ಹಿಡಿದರು ಎಂಬಂತೆ ಕಟ್ಟ ಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತಲುಪುತ್ತದೆಯೋ ಇಲ್ಲವೋ ಎಂಬ ದಟ್ಟ ಅನುಮಾನ ಈ ಜಿಲ್ಲೆಗಳ ಜನರಲ್ಲಿ ಕಾಡುತ್ತಿದೆ. ಅಸಲಿಗೆ ಈ ಯೋಜನೆ ರೂಪಿಸಿದ್ದೇ ಈ ಮೂರು ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು. ಈ ಉದ್ದೇಶವೇ ಸಾರ್ಥಕವಾಗಿದ್ದಾರೆ ಈ ಇಡೀ ಯೋಜನೆ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನಿಜವಾಗಿಯೂ ಈ ಭಾಗದ ಜನರ ಬಗ್ಗೆ ಬದ್ಧತೆ ಇದ್ದಿದ್ದರೆ ಎತ್ತಿನಹೊಳೆ ಯೋಜನೆಗೆ ಈ ಮೂರು ಜಿಲ್ಲೆಗಳಲ್ಲಿ ಒಂದು ಕಡೆ ಚಾಲನೆ ನೀಡಬೇಕಾಗಿತ್ತು.

ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರೆಂಟಿಗಳ ರೀತಿಯಲ್ಲಿ ಇಂದಿನ ಕಾರ್ಯಕ್ರಮವೂ ಒಂದು ಬಿಟ್ಟಿ ಪ್ರಚಾರ ಪಡೆಯುವ ನಾಟಕವೇ ಹೊರತು ಇದರಿಂದ ಜನರಿಗೆ ಯಾವುದೇ ಲಾಭವಿಲ್ಲ ಎಂದು ಅಶೋಕ್‌ ಲೇವಡಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

4 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

26 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago