ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಯಿತು.
ಮೈಸೂರು ಸಂಸ್ಥಾನದ ಪರವಾಗಿ ಆಗಮಿಸಿದ ಅರಸು ಸಂಘದ ರಾಜ್ಯಾಧ್ಯಕ್ಷ ದಿನೇಶ್ ತಂಡಕ್ಕೆ ದೇವಾಲಯದ ಆಡಳಿತ ಮಂಡಳಿ ಸ್ವಾಗತ ನೀಡಿತು. ಬಳಿಕ ಹಣ್ಣು, ಕಾಯಿ, ವೀಳ್ಯದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಲಾಯಿತು.
ಇನ್ನು ದೇವಿರಮ್ಮನ ಬೆಟ್ಟದ ತಪ್ಪಲಿನ ಕೆಳಭಾಗದಲ್ಲಿರುವ ದೇವಸ್ಥಾನಕ್ಕೆ ಗಾಳಿ ರೂಪದಲ್ಲಿ ದೇವಿರಮ್ಮ ಪ್ರವೇಶಿಸಿದ್ದಾಳೆ. ವರ್ಷಕ್ಕೊಮ್ಮೆ ಬೆಟ್ಟದ ಮೇಲೆ ಭಕ್ತರಿಗೆ ದರ್ಶನ ನೀಡುವ ದೇವೀರಮ್ಮ ಉಳಿದ 364 ದಿನ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾಳೆ.
ಈ ಬಾರಿ ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಲಾಗಿತ್ತು. ಎರಡು ದಿನದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭಕ್ತರು ಬರೀಗಾಲಿನಲ್ಲಿ ಬೆಟ್ಟವನ್ನು ಏರಿ ದೇವಿರಮ್ಮ ತಾಯಿಯ ದರ್ಶನ ಪಡೆದು ಪುನೀತರಾದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…