ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಸರ್ಕಾರಿ ಅಧೀಕಾರಿಗಳು ಜನಪ್ರತಿನಿಧೀಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್‌ಎಗಳ ಮತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ನಿರತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದರು.
ಇನ್ನು ಮುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಮುಖ್ಯ ಕಾರ್ಯದರ್ಶು ಶಾಲಿನಿ ರಜನೀಶ್ ಖಡಕ್ ಸೂಚನೆ ನೀಡಿದ್ದಾರೆ.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…