ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗಿದ್ದು, ಸಾರ್ವಜನಿಕ ಹಾಗೂ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ನೆರೆ ರಾಜ್ಯಗಳಿಗಿಂತ ಕಡಿಮೆಯಿದೆ ಇನ್ನುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥಸಿಕೊಂಡಿದ್ದಾರೆ.
ವ್ಯಾಟ್ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್, ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲೇ ಕಡಿಮೆ ಇರೋದು. ಹಾಗೆಯೇ ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶಕ್ಕಿಂತಲೂ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆಗಿನ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲವನ್ನು ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ವ್ಯಾಟ್ ಕಡಿಮೆ ಮಾಡಿದ್ದರು. ಕೇಂದ್ರ ಬಿಜೆಪಿ ಪದೇ ಪದೇ ವ್ಯಾಟ್ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದರು.
ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ತೈಲ ದರ ತಲಾ 9.48 ರೂ 3.56 ರೂ ತೆರಿಗೆ ಇತ್ತು. ಬಿಜೆಪಿಯ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ತೆರಿಗೆ ಹೆಚ್ಚಳವಾಗಿದೆ. ಪೆಟ್ರೋಲ್ಗೆ 32.98 ರೂ. ಹಾಗೂ ಡೀಸೆಲ್ 31.83 ರೂ ಹೆಚ್ಳ ಮಾಡಲಾಗಿದೆ. ಸದ್ಯ ಪೆಟ್ರೋಲ್ ಮೇಲಿನ ತೆರಿಗೆ 19.9 ರೂಪಾಯಿ ಹಾಗೂ ಡೀಸೆಲ್ ಮೇಲೆ 18.8 ರೂಪಾಯಿ ತೆರಿಗೆ ಇದೆ. ಕೇಂದ್ರ ಸರ್ಕಾರ ಜನರ ಒಳಿತಿಗೆ ತೆರಿಗೆ ಕಡಿಮೆ ಮಾಡಬೇಕು. ವ್ಯಾಟ್ ಹೆಚ್ಚಳದಿಂದ ಬಂದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡಲಾಗುವುದು ಎಂದು ಹೇಳಿದರು.