ರಾಜ್ಯ

ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ತೈಲ ಬೆಲೆ ಕಡಿಮೆ: ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಹೆಚ್ಚಳವಾಗಿದ್ದು, ಸಾರ್ವಜನಿಕ ಹಾಗೂ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆ ರಾಜ್ಯಗಳಿಗಿಂತ ಕಡಿಮೆಯಿದೆ ಇನ್ನುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥಸಿಕೊಂಡಿದ್ದಾರೆ.

ವ್ಯಾಟ್‌ ಹೆಚ್ಚಳದ ನಂತರ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲೂ ನಮ್ಮ ರಾಜ್ಯದಲ್ಲಿ ಕಡಿಮೆ ದರವಿದೆ. ಗುಜರಾತ್‌, ಮಧ್ಯಪ್ರದೇಶಕ್ಕಿಂತಲೂ ನಮ್ಮಲ್ಲೇ ಕಡಿಮೆ ಇರೋದು. ಹಾಗೆಯೇ ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶಕ್ಕಿಂತಲೂ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಗಿನ ಡಬಲ್‌ ಇಂಜಿನ್‌ ಬಿಜೆಪಿ ಸರ್ಕಾರ ನಮ್ಮ ರಾಜ್ಯದ ಸಂಪನ್ಮೂಲವನ್ನು ಬೇರೆ ರಾಜ್ಯಕ್ಕೆ ನೀಡಿತ್ತು. ರಾಜ್ಯ ಬಿಜೆಪಿ ವ್ಯಾಟ್‌ ಕಡಿಮೆ ಮಾಡಿದ್ದರು. ಕೇಂದ್ರ ಬಿಜೆಪಿ ಪದೇ ಪದೇ ವ್ಯಾಟ್‌ ಹೆಚ್ಚಳ ಮಾಡಿತ್ತು. ಇದರಿಂದ ನಮ್ಮ ರಾಜ್ಯದ ಆದಾಯ ಕುಂಠಿತವಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಕನ್ನಡಿಗರನ್ನು ವಂಚಿಸಿ ಹೆಚ್ಚು ತೆರಿಗೆ ಸಂಗ್ರಹ ಮಾಡಿತ್ತು ಎಂದು ಆರೋಪಿಸಿದರು.

ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ತೈಲ ದರ ತಲಾ 9.48 ರೂ 3.56 ರೂ ತೆರಿಗೆ ಇತ್ತು. ಬಿಜೆಪಿಯ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ತೆರಿಗೆ ಹೆಚ್ಚಳವಾಗಿದೆ. ಪೆಟ್ರೋಲ್ಗೆ 32.98 ರೂ. ಹಾಗೂ ಡೀಸೆಲ್‌ 31.83 ರೂ ಹೆಚ್ಳ ಮಾಡಲಾಗಿದೆ. ಸದ್ಯ ಪೆಟ್ರೋಲ್‌ ಮೇಲಿನ ತೆರಿಗೆ 19.9 ರೂಪಾಯಿ ಹಾಗೂ ಡೀಸೆಲ್‌ ಮೇಲೆ 18.8 ರೂಪಾಯಿ ತೆರಿಗೆ ಇದೆ. ಕೇಂದ್ರ ಸರ್ಕಾರ ಜನರ ಒಳಿತಿಗೆ ತೆರಿಗೆ ಕಡಿಮೆ ಮಾಡಬೇಕು. ವ್ಯಾಟ್‌ ಹೆಚ್ಚಳದಿಂದ ಬಂದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡಲಾಗುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

7 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

7 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

8 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

8 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

9 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

9 hours ago