ರಾಜ್ಯ

ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧ ಬಲಿ

ಶಿವಮೊಗ್ಗ : ಝೀಕಾ ವೈರಸ್‌  ಸೋಂಕಿನಿಂದ ೭೪ ವರ್ಷದ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆಸಿದೆ.

ಜೂ.೧೯ ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ವೃದ್ದನನ್ನ ದಾಖಲಿಸಿದ್ದರು. ಬಳಿಕ ಜೂ ೨೧ ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು ಸೂಕ್ತ ಚಿಕಿತ್ಸೆಯನ್ನ ನೀಡಲಾಯಿತು. ಗುರುವಾರ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿಸಿ ಮನೆಗೆ ಕರೆದುಕೊಂಡು ಹೋಗಿದ್ದರು. ಆದರೆ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಕಳೆದ ಶುಕ್ರವಾರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ವೃದ್ಧನಿಗೆ ಜ್ವರ ಮಾತ್ರ ಅಲ್ಲದೆ ಬೇರೆ ಕಾಯಿಲೆ ಸಹ ಇತ್ತು ಎಂದು ತಿಳಿದುಬಂದಿದೆ.

 

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago