ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪಲ್ಲವಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರಿಂದ ಭ್ರಮೆಯಲ್ಲಿ ಪತಿಯನ್ನೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹತ್ಯೆಗೆ ನಿಖರ ಕಾರಣ ಹಾಗೂ ಆಳವಾದ ತನಿಖೆ ನಡೆಸಲು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.





