ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಈ ಪ್ರದೇಶವನ್ನು ʼಮಹಾತ್ಮ ಗಾಂಧೀಜಿ ನವನಗರʼ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಭಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ ಎಂದರು.
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಷಯ ಎಂದು ಹೇಳಿದರು.
ಬೆಳಗಾವಿಯಲ್ಲಿ ಅಂದು ನಡೆದ ಅಧಿವೇಶನದಲ್ಲಿ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಅಂದಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಂದು 80ಕ್ಕೂ ಹೆಚ್ಚು ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ.
ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಭೆಯಲ್ಲಿ ಸರ್ಚಿಸುತ್ತೇವೆ ಎಂದು ತಿಳಿಸಿದರು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…