Mysore
30
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಗೋಡ್ಸೆ ಅನುಯಾಯಿಗಳಿಂದ ಬೇರೇನೂ ನಿರೀಕ್ಷಿಸಲು ಸಾಧ್ಯ: ಬಿ.ಕೆ ಹರಿಪ್ರಸಾದ್‌

ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್‌ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ.

ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಮಹಿಳೆಯರ ಮತ್ತು ರೈತರ ಬಗ್ಗೆ ಕಾಳಜಿ ಇಲ್ಲ, ನಮ್ಮದು ಜ್ಯಾತ್ಯಾತೀತ ರಾಷ್ಟ್ರ ಆದ್ದರಿಂದ ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.

ಕಾಂಗ್ರೆಸ್‌ ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡುತ್ತದೆ. ಆದರೆ ಬಿಜೆಪಿ ಬಹು ಸಂಖ್ಯಾತರ ತುಷ್ಟಿಕರಣ ಮಾಡಿಕೊಂಡು ಕಳೆದ 10 ವರ್ಷಗಲ್ಲಿ ಸುಳ್ಳು ಮತ್ತು ಹಿಂಸೆಯನ್ನು ಪ್ರಚಾರ ಮಾಡುತ್ತಾ ತುಷ್ಟಿಕರಣ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!