ರಾಜ್ಯ

ಒಂದು ದೇಶ ಒಂದು ಚುನಾವಣೆ | ಪ್ರಾದೇಶಿಕ ಪಕ್ಷ ಮುಗಿಸಲು ಬಿಜೆಪಿ ಮಾಡಿರುವ ಪ್ಯ್ಲಾನ್‌; ಡಿಕೆಶಿ

ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಬಿಜೆಪಿ ಮಾಡಿರುವ ಪ್ಲ್ಯಾನ್‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಮಸೂದೆ ಮಂಡನೆ ವಿಚಾರಕ್ಕೆ ಕಿಡಿಕಾರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಮಸೂದೆಯು ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿದೆ. ಈ ಮಸೂದೆ ರಾಜ್ಯದ ಹಕ್ಕುಗಳನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಹೇಳಿದ್ದಾರೆ.

ಇದು ಕಾಂಗ್ರೆಸ್‌ ಪಕ್ಷದ ಸಿದ್ದಾಂತಕ್ಕೆ ವಿರುದ್ದವಾಗಿದೆ. ದೇಶಾದ್ಯಂತ ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧಿಸಿದ್ದಾರೆ. ಇತ್ತೀಚಿಗೆ ಪ್ರಾದೇಶಿಕ ಪಕ್ಷಗಳು ತಮ್ಮ ನೆಲದಲ್ಲಿ ಹಿಡಿತ ಸಾಧಿಸುತ್ತಿವೆ. ಇದನ್ನು ಸಹಿಸದ ಕೇಂದ್ರ ಸರ್ಕಾರ ಇಂತಹ ಮಸೂದೆಗಳನ್ನು ಜಾರಿ ಮಾಡುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು  ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ ಸಂತ್ರಸ್ತರ ವಿಚಾರವಾಗಿ ಮಾತನಾಡಿದ ಅವರು, ಭೂ ಸ್ವಾಧೀನ ನೋಟಿಫಿಕೇಶನ್‌ ಆಗಬೇಕಿದೆ. ನೋಟಿಫಿಕೇಶನ್‌ ಮುಂಚೆಯೇ ಕೆಲಸ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಇಷ್ಟು ಬೆಲೆ ಇಲ್ಲ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನೀಡಿದ ರೇಟ್‌ ನೀಡಲು ನಾವು ಸಿದ್ದರಾಗಿದ್ದೇವೆ. ಸಿಎಂ ಇದೇ ವಿಚಾರವಾಗಿ ಸೋಮವಾರ ಸಭೆ ನಡೆಸಲಿದ್ದಾರೆ. ಸಂತ್ರಸ್ತರ ಬೇಡಿಕೆಗಳಿಗನುಗುಣವಾಗಿ ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬಹುದೋ ಅದನ್ನು ಮಾಡುತ್ತೇವೆ. ಅದಕ್ಕೂ ಮೊದಲು ಕೇಂದ್ರ ಗೆಜೆಟ್‌ ನೋಟಿಫಿಕೇಷನ್‌ ಮಾಡಬೇಕಿದೆ. ಕೇಂದ್ರ 16 ಸಾವಿರ ಕೋಟಿ ಮಾತ್ರ ಕೊಟ್ಟಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

11 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

11 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

12 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

12 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

13 hours ago