Mysore
20
overcast clouds
Light
Dark

ಸರೋಜಿನಿ ಮಹಿಷಿ ವರದಿ ಜಾರಿಗೆ ಒಂದು ತಿಂಗಳ ಗಡುವು ಕೊಟ್ಟ ಕರ್ನಾಟಕ ರಕ್ಷಣಾ ವೇದಿಕೆ

ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗಿದೆ.

ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ಟಿ.ಎ.ನಾರಾಯಣಗೌಡ ಅವರು, ರಾಜ್ಯದಲ್ಲಿ ಡಾ.ಸರೋಜಿನಿ ಮಹಿಷಿ ವರದಿಯನ್ನು ಮುಂದಿನ ಒಂದು ತಿಂಗಳ ಒಳಗಾಗಿ ಜಾರಿಗೆ ತರಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕರವೇ ನಿಯೋಗದಿಂದ ಮನವಿ ಸಲ್ಲಿಸಲಾಗುವುದು. ಈ ಮೂಲಕ ರಾಜ್ಯ ಸರ್ಕಾರಕ್ಕೆ ಸರೋಜಿನಿ ಮಹಿಷಿ ವರದಿ ಜಾರಿಗೆ ಒಂದು ತಿಂಗಳ ಗಡುವು ನೀಡಲಾಗುವುದು. ಒಂದೊಮ್ಮೆ ಗಡುವಿನೊಳಗೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ರಾಜ್ಯ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.