ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗಿದೆ.
ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕರವೇ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ಟಿ.ಎ.ನಾರಾಯಣಗೌಡ ಅವರು, ರಾಜ್ಯದಲ್ಲಿ ಡಾ.ಸರೋಜಿನಿ ಮಹಿಷಿ ವರದಿಯನ್ನು ಮುಂದಿನ ಒಂದು ತಿಂಗಳ ಒಳಗಾಗಿ ಜಾರಿಗೆ ತರಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕರವೇ ನಿಯೋಗದಿಂದ ಮನವಿ ಸಲ್ಲಿಸಲಾಗುವುದು. ಈ ಮೂಲಕ ರಾಜ್ಯ ಸರ್ಕಾರಕ್ಕೆ ಸರೋಜಿನಿ ಮಹಿಷಿ ವರದಿ ಜಾರಿಗೆ ಒಂದು ತಿಂಗಳ ಗಡುವು ನೀಡಲಾಗುವುದು. ಒಂದೊಮ್ಮೆ ಗಡುವಿನೊಳಗೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…