ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.