ರಾಜ್ಯ

ಒಂದು ವಾಹನ ಒಂದು ಫಾಸ್ಟ್‌ ಟ್ಯಾಗ್‌ ನಿಯಮ ದೇಶಾದ್ಯಂತ ಜಾರಿ !

ನವದೆಹಲಿ:  ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹಲವು ವಾಹನಗಳಿಗೆ ಒಂದೇ ಫಾಸ್ಟ್ ಬಳಕೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್ ಗಳನ್ನು ಲಿಂಕ್ ಮಾಡುವುದನ್ನು ಈ ನಿಯಮ ನಿರ್ಬಂಧಿಸುತ್ತದೆ.

ಮಾರ್ಚ್ 1 ರಿಂದಲೇ ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಜಾರಿಗೆ ಬರಬೇಕಿತ್ತು. ನಿರ್ಬಂಧಿತ ಪೇಟಿಎಂ ಪೇಮೆಂಟ್ ಬ್ಯಾಂಕ್ ನ ಫಾಸ್ಟ್ಯಾಗ್ ಬಳಕೆದಾರರು ತೊಂದರೆಗೀಡಾದ ಕಾರಣ ಒಂದು ತಿಂಗಳವರೆಗೆ ಗಡುವು ವಿಸ್ತರಿಸಲಾಗಿತ್ತು. ಹೀಗಾಗಿ ಏಪ್ರಿಲ್ 1ರಿಂದ ಜಾರಿಗೆ ಬಂದಿದೆ.

ಇನ್ನು ಬಹು ಫಾಸ್ಟ್ಯಾಗ್ ಗಳು ಕಾರ್ಯ ನಿರ್ವಹಿಸುವುದಿಲ್ಲ. ಒಂದು ವಾಹನಕ್ಕೆ ಬಹು ಫಾಸ್ಟ್ಯಾಗ್ ಗಳನ್ನು ಹೊಂದಿರುವರವರಿಗೆ ಏಪ್ರಿಲ್ 1ರಿಂದ ಆ ಫಾಸ್ಟ್ಯಾಗ್ ಬಳಸಲು ಸಾಧ್ಯವಾಗುವುದಿಲ್ಲ. ಕೆಲವರು ಒಂದೇ ವಾಹನಕ್ಕೆ ಹಲವು ಫಾಸ್ಟ್ಯಾಗ್ ಲಿಂಕ್ ಮಾಡುತ್ತಿದ್ದರು ಅಥವಾ ಅನೇಕ ವಾಹನಗಳಿಗೆ ಒಂದೇ ಫಾಸ್ಟ್ಯಾಗ್ ಬಳಕೆ ಮಾಡುತ್ತಿದ್ದರು.

ಇದನ್ನು ತಡೆಗಟ್ಟಿ ಟೋಲ್ ಗಳಲ್ಲಿ ತಡೆರಹಿತ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಜಾರಿಗೆ ತಂದಿತ್ತು.

ಕೆವೈಸಿ ಅಪೂರ್ಣವಾಗಿರುವ ಗ್ರಾಹಕರು ತಾವು ಫಾಸ್ಟ್ಯಾಗ್ ಪಡೆದ ಬ್ಯಾಂಕ್ ಗಳಿಗೆ ಹೋಗಿ ಕೆವೈಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ. ಟೋಲ್ ಗಳಲ್ಲಿ ಅಡೆತಡೆ ಇಲ್ಲದೆ ಪ್ರಯಾಣಿಸಬಹುದಾಗಿದ್ದು, ಸೋರಿಕೆ ತಡೆಯಾಗಿ ಆದಾಯ ಎಚ್ಚರವಾಗುವ ನಿರೀಕ್ಷೆ ಇದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago