ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಅವರು, ತಾಪಮಾನದ ವೈಪರೀತ್ಯದಿಂದಾಗಿ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ತಾಪಮಾನದಿಂದ ರಾತ್ರಿ ಹಾಗೂ ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತದೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ. ಡ್ಯಾಂಗಳ ನೀರು ಆವಿಯಾಗುತ್ತಿದ್ದು, ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆಯಿದೆ. ಇದರಿಂದ ಪ್ರಾಣಿ, ಪಕ್ಷಿ ಹಾಗೂ ಮನುಷ್ಯರಿಗೂ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…