ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಲವೆಡೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಕರಾವಳಿಯಲ್ಲಿ ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.




