ರಾಜ್ಯ

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವವ ಮಧ್ಯ ಅರೇಬಿಯನ್‌ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್.‌21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೊಳಗಾಗಿದ್ದ ಮಹದೇವಪುರ ಮತ್ತು ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಿಸು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

 

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

2 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

2 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

2 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago