ಬೆಂಗಳೂರು: Department of School Education & Literacy, ನವದೆಹಲಿ ಅವರ ಮಾರ್ಗಸೂಚಿಯಂತೆ ಎನ್‌ಎಂಎಂಎಸ್ ಪರೀಕ್ಷೆಯನ್ನು ಇದೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 19, 2024ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎನ್‌ಎಂಎಂಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ https://kseab.karnataka.gov.in/ ವೆಬ್ ಸೈಟ್ ನಲ್ಲಿ ಲಭ್ಯಮಾಡಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯ ಮಾಡಲಾಗಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಯ ಸ್ಥಿರ ದೂರವಾಣಿ ಸಂಖ್ಯೆ: 080-23341615 ಅನ್ನು ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು.
ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಸೂಕ್ತ ಮಾರ್ಗದರ್ಶನ ಹಾಗೂ ವ್ಯಾಪಕ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಲು ಅಗತ್ಯ ಕ್ರಮ ವಹಿಸಲು ತಿಳಿಸಿದೆ.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…