ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಿ ಇತ್ತೀಚೆಗೆ ಅರಣ್ಯ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈಗ ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೂ ಆನ್ ಲೈನ್ ಬುಕಿಂಗ್ ಜಾರಿಗೊಳಿಸಲು ಹೊರಟಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಟ್ರೆಕ್ಕಿಂಗ್ ಪ್ರಕ್ರಿಯೆಯನ್ನ ನಿಯಂತ್ರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಮಂಗಳೂರು ವ್ಯಾಪ್ತಿಯ ಕುದುರೆಮುಖ, ನೇತ್ರಾವತಿ ಮತ್ತು ಇತರ ಕೆಲವು ಟ್ರೆಕ್ಕಿಂಗ್ ತಾಣಗಳಿಗೆ ಇಲಾಖೆಯು ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಪರಿಚಯಿಸಿದೆ. ಜುಲೈ ತಿಂಗಳಲ್ಲಿ ಇದ್ದನ್ನ ವಿಸ್ತರಿಸುತ್ತೇವೆ. ಈಗಾಗಲೇ ಒಂದೇ ವೆಬ್ ಸೈಟ್ ನಲ್ಲಿ ಎಲ್ಲಾ ಟ್ರೆಕ್ಕಿಂಗ್ ತಾಣಗಳಿಗೆ ಆನ್ ಲೈನ್ ಬುಕಿಂಗ್ ಮಾಡಲು ಅವಕಾಶ ಕಲ್ಪಿಸುವ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಇನ್ನ ೧೫ ದಿನಗಳಲ್ಲಿ ಸಿದ್ದವಾಗಲಿದೆ ಎಂದು ತಿಳಿಸಿದರು.