ರಾಜ್ಯ

ಆನ್‌ಲೈನ್‌ ಗೇಮಿಂಗ್‌: ಮಹತ್ವದ ಮಾಹಿತಿ ನೀಡಿದ ಜಿ.ಪರಮೇಶ್ವರ್‌

ಬೆಳಗಾವಿ: ಆನ್‌ಲೈನ್‌ ಗೇಮಿಂಗ್‌ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೀರ್ಮಾನದ ಬಳಿಕ ರಾಜ್ಯ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.15)ಆನ್‌ಲೈನ್‌ ಗೇಮಿಂಗ್‌ ಕುರಿತು ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆನ್‌ಲೈನ್‌ ಗೇಮ್‌ಗಳನ್ನು ನಿರ್ಬಂಧಿಸಿ ಕರ್ನಾಟಕ ಪೊಲೀಸ್‌ ಕಾಯ್ದೆಯಡಿ ಆದೇಶ ಹೊರಡಿಸಲಾಗಿದ್ದು, ಗೇಮಿಂಗ್‌ ಪ್ರವರ್ತಕರು ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಗೃಹ ಇಲಾಖೆಯ ಈ ಆದೇಶವನ್ನು ಹೈಕೋರ್ಟ್‌  ರದ್ದುಗೊಳಿಸಿತ್ತು. ಹೀಗಾಗಿ ಆ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಕೋರ್ಟ್‌ ತೀರ್ಮಾನದ ನಂತರ ಆನ್‌ಲೈನ್‌ ಗೇಮಿಂಗ್‌ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಅನೇಕ ಗೇಮಿಂಗ್‌ ಆಪ್‌ಗಳು ಪರವಾನಗಿ ಇಲ್ಲದೆ ಕಾರ್ಯಾಚರಣೆ ನಡೆಸುತ್ತಿದ್ದು, ಹೈಕೋರ್ಟ್‌ ಆದೇಶದ ಕಾರಣದಿಂದ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಆನ್‌ಲೈನ್‌ ಗೇಮಿಂಗ್‌ ವ್ಯಾಮೋಹಕ್ಕೆ ಬಲಿಯಾಗಿ ಹಣ ಕಳೆದುಕೊಂಡು ಐವರು ಬೆಂಗಳೂರಿನಲ್ಲಿ ಹಾಗೂ ವಿಜಯನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಆರ್‌.ಅಶೋಕ್‌ ಮಾತನಾಡಿ, ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದು ಸಾರ್ವಜನಿಕರು ಬಲಿಯಾಗುತ್ತಿದ್ದಾರೆ. ಕೋಟ್ಯಾಧೀಶ್ವರಾಗಿದ್ದವರು ಹಣ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದಾರೆ. ಜೊತೆಗ ಮನೆಗಳಲ್ಲಿ ಕೆಲಸಲಕ್ಕೆ ಬರುವವರು ಆನ್‌ಲೈನ್‌ ಗೇಮಿಂಗ್‌ ವಿಚಾರವಾಗಿ ಕಳ್ಳತನದ ಹಾದಿ ಹಿಡಿಯುತ್ತಿದ್ದಾರೆ. ಹೀಗಾಗಿ ಸರ್ಕಾರ ಆನ್‌ಲೈನ್‌ ಗೇಮಿಂಗ್‌ ನಿಯಂತ್ರಣಕ್ಕೆ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago