ರಾಜ್ಯ

ಮುಳ್ಳಯ್ಯನಗಿರಿಗೆ ತೆರಳಲು ಇನ್ಮುಂದೆ ಆನ್‌ಲೈನ್‌ ನೋಂದಣಿ ಕಡ್ಡಾಯ; ದಿನಕ್ಕೆ 600 ವಾಹನಗಳಿಗೆ ಅವಕಾಶ

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ.

ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬರುವ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ, ಬಾಬಾ ಬುಡನ್‌ ಗಿರಿ, ದರ್ಗಾ ಸೇರಿದಂತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಗಿರಿಭಾಗಕ್ಕೆ ಬರುತ್ತಾರೆ. ಇದರಿಂದ ಗಿರಿಭಾಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಬಗ್ಗೆ ಪರಿಸರ ಪ್ರೇಮಿಗಳು ಅಸಮಾಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆನ್‌ಲೈನ್‌ ಮೂಲಕ ನೋಂದಣಿ ಮಾಡಿ ದಿನಕ್ಕೆ ನಿರ್ದಿಷ್ಟ ವಾಹನಗಳನ್ನು ಮಾತ್ರ ಬಿಡಲು ಚಿಂತನೆ ನಡೆಸಿದೆ.

ಇನ್ನೂ ಅಲ್ಲಿ ವಾಹನ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ದಿನಕ್ಕೆ ಎರಡು ಸಮಯದಲ್ಲಿ 600 ವಾಹನಗಳಿಗೆ ಮಾತ್ರ ಗಿರಿಭಾಗಕ್ಕೆ ತೆರಳಲು ಅವಕಾಶ ಕಲ್ಪಿಸಲಿದೆ. ಬೆಳಿಗ್ಗೆ 9 ಗಂಟೆಗೆ 300 ವಾಹನ, ಮಧ್ಯಾಹ್ನ 2 ಗಂಟೆಗೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.

ಇನ್ನೂ ಮಳೆಗಾಲದ ಆರಂಭದಲ್ಲೇ ಚಾರಣಕ್ಕೆ ನಿಷೇಧ ಹಾಕಿರುವುದು ಟ್ರಕ್ಕಿಂಗ್‌ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಇಲ್ಲಿಗೆ ಸಾವಿರಾರು ಪ್ರವಾಸಿಗರು ಅರಣ್ಯ ಇಲಾಖೆ ನಿಯಮಗಳನ್ನು ಪಾಲಿಸಿಕೊಂಡು ಚಾರಣ ಮಾಡುತ್ತಿದ್ದರು. ಈಗ ಚಾರಣಕ್ಕೆ ನಿಷೇಧ ಹೇರಲಾಗಿದ್ದು, ನಿಬಂಧನೆಗಳೊಂದಿಗೆ ಚಾರಣಕ್ಕೆ ಅವಕಾಶ ನೀಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago