ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್‌ಲೈನ್ ಪೋರ್ಟಲ್ ಮೂಲಕವೇ ನಿಭಾಯಿಸಬೇಕು. ಯಾರಿಗೆ ಎಷ್ಟು ಸಾಲ ನೀಡಿದೆ ಎಂಬುದನ್ನು ಪೋರ್ಟಲ್‌ನಲ್ಲಿ ಉಲ್ಲೇಖಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ ರಿಸರ್ವ್ ಬ್ಯಾಂಕ್ ನೀತಿಗೆ ಅನುಗುನವಾಗಿರಬೇಕು ಎಂಬ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳು ರಾಜ್ಯದಲ್ಲಿ ನೋಂದಣಿ ಆಗೀರಬೇಕು. ಈ ಕಂಪನಿಗಳ ವ್ಯವಹಾರಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳನ್ನು ಒಳಗೊಂಡ ಒಂಬುಡ್ಸುಮನ್ ನೇಮಕ ಮಾಡಬೇಕು. ಹಾಗೆಯೇ ಈ ಕಂಪನಿಗಳು ಸಾಲದ ಹೆಸರಿನಲ್ಲಿ ಬಡ ಜನರಿಂದ ಯಾವುದೇ ವಸ್ತು ಅಥವಾ ಆಸ್ತಿಗಳನ್ನು ಅಡಮಾನ ಇಟ್ಟುಕೊಳ್ಳಬಾರದು ಎಂದು ಷರತ್ತು ವಿಧಿಸಲು ತೀರ್ಮಾನಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…