ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.
ಸಮೀಕ್ಷೆ ವರದಿಯನ್ನು ಸರಿಯಾಗಿ ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ ಎಂದರು.
ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.
ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ : ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ
ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ.
ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…