ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಿದೆ. ರಾಜ್ಯದಾದ್ಯಂತ 10 ಸಾವಿರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ನಾನು. ಬಿಜೆಪಿಯವರು ಅನ್ನಭಾಗ್ಯ ಯೋಜನೆಯನ್ನು ಕೊಟ್ಟಿದ್ದಾರಾ? ಅವರು ಯಾವತ್ತಾದರೂ ಅನ್ನಭಾಗ್ಯ ಯೋಜನೆ ನೀಡಿದ್ದಾರಾ ಎಂದು ಪ್ರಶ್ನೆ ಮಾಡಿದರು.
ಇನ್ನು ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಬೇಕು. ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಬೇಕು ಅಷ್ಟೇ ಎಂದರು.