ರಾಜ್ಯ

5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದು ಮತ್ತು ಡಿಕೆಶಿಗೆ ಮಾತ್ರ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಅವರಿಗೆ ಮಾತ್ರ. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು.

ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

ಸಿಎಂ ಹೇಳಿಕೆ ರಾಜಕೀಯ ಬಣಕ್ಕೆ ಕಾರಣವಾಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿ, ಏನೂ ಆಗಲ್ಲ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಅನ್ನೊದು ನನ್ನ ಅನಿಸಿಕೆ. ನಾನಂತೂ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಕ್ಕೆ ಹೋಗಲ್ಲ ಎಂದು ಹೇಳಿದರು.

lokesh

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

35 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago