ಬೆಂಗಳೂರು: ಜೆಡಿಎಸ್ ಮುಗಿಸಬೇಕು ಅಂತಲೇ ಆಪರೇಷನ್ ಹಸ್ತ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಹಸ್ತ ವರ್ಕೌಟ್ ಆಗಲ್ಲ. ನಮ್ಮ ಪಕ್ಷದ ಯಾವ ಶಾಸಕರು ಕೂಡ ಕಾಂಗ್ರೆಸ್‌ಗೆ ಹೋಗುವ ಪರಿಸ್ಥಿತಿ ಬಂದಿಲ್ಲ. ಕಾಂಗ್ರೆಸ್‌ನವರು ಏನೇನು ಮಾಡುತ್ತಿದ್ದಾರೆ ಗೊತ್ತಿದೆ. ದೇವರೇ ಅವರಿಗೆಲ್ಲಾ ಶಿಕ್ಷೆ ಕೊಡುತ್ತಾನೆ ಎಂದು ನಾನು ಸುಮ್ಮನಿದ್ದೇನೆ ಎಂದರು.
ಇನ್ನು ರಾಜ್ಯದಲ್ಲಿ ಡಿಸೆಂಬರ್.5ರಿಂದ ಬಸ್ ಪ್ರಯಾಣ ದರ ಏರಿಕೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಬೆಲೆ ಏರಿಕೆಗೆ ಸಿದ್ಧರಾಗಿ ಎಂದು ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಹಲವಾರು ಬಾರಿ ಬೆಲೆ ಏರಿಕೆ ಮಾಡಿದೆ. ಈ ಬಗ್ಗೆ ಜನರು ಕೂಡ ಒಂದೆರಡು ದಿನ ವಿರೋಧಿಸಿ ಅಮೇಲೆ ಎಲ್ಲವನ್ನೂ ಮರೆತುಬಿಡುತ್ತಾರೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನೋದೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…