Mysore
20
overcast clouds
Light
Dark

ಕರ್ನಾಟಕದಲ್ಲಿ ಆಪರೇಷನ್‌ ಕಮಲ ಕುರಿತು ಶಿಂಧೆ ಭ್ರಮೆಯಲ್ಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್‌ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಶಿಂಧೆ ಅವರ ಆಪರೇಷನ್‌ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ ಆದಂತೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್‌ ಕಮಲ ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿಯೇ ಮಾಡಲು ಹೋಗಿ ಬಿಜೆಪಿ ವಿಫಲಗೊಂಡಿದೆ. ಇನ್ನು ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಬಣ ಇರುವುದೇ ಅನುಮಾನವಾಗಿದೆ. ಎಲ್ಲರೂ ಕೂಡಾ ಅವರವರ ಪಕ್ಷಕ್ಕೆ ವಾಪಾಸಾಗಲಿದ್ದಾರೆ. ಮಹಾ ಸರ್ಕಾರದ ಒರಿಜಿನಲ್‌ ಶಿವಸೇನಾ ನಾಯಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಮಹಾ ಸಿಎಂ ಶಿಂಧೆ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.