ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರದಲ್ಲಿ ನಡೆದಂತೆ ಆಪರೇಷನ್ ಕಮಲ ನಡೆಯುವುದಿಲ್ಲ. ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಶಿಂಧೆ ಅವರ ಆಪರೇಷನ್ ಕಮಲ ಹೇಳಿಕೆ ಕುರಿತು ಆಕ್ರೋಶ ಹೊರ ಹಾಕಿರುವ ಸಿಎಂ, ಮಹಾರಾಷ್ಟ್ರದಲ್ಲಿ ಆದಂತೆ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್ ಕಮಲ ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿಯೇ ಮಾಡಲು ಹೋಗಿ ಬಿಜೆಪಿ ವಿಫಲಗೊಂಡಿದೆ. ಇನ್ನು ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಶಿಂಧೆ ಬಣ ಇರುವುದೇ ಅನುಮಾನವಾಗಿದೆ. ಎಲ್ಲರೂ ಕೂಡಾ ಅವರವರ ಪಕ್ಷಕ್ಕೆ ವಾಪಾಸಾಗಲಿದ್ದಾರೆ. ಮಹಾ ಸರ್ಕಾರದ ಒರಿಜಿನಲ್ ಶಿವಸೇನಾ ನಾಯಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಮಹಾ ಸಿಎಂ ಶಿಂಧೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…