ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಸುತ್ತಿದೆ.
ಬೆಂಗಳೂರಿನ ಮಲ್ಲೇಶ್ವರಂ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ 18ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ವಿಪಕ್ಷ ನಾಯಕ ಆರ್.ಅಶೋಕ್, ಎಂಎಲ್‌ಸಿ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಆಪರೇಷನ್ ಸಿಂಧೂರ್ ಟೋಪಿ ಧರಿಸಿ ಭಾರತೀಯ ಯೋಧರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ನಾಯಕರು, ಭಾರತೀಯ ಸೇನೆಗೆ ಜೈಕಾರ ಹಾಕಿ ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:- ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ಇನ್ನು ಮೇ.16 ಹಾಗೂ 17ರಂದು ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದ್ದು, ಮೇ.18 ಹಾಗೂ 23ರವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ.





