ರಾಜ್ಯ

ವಿರೋಧ ಪಕ್ಷಗಳ ನಾಟಕ ಜನರ ಮುಂದೆ ಬಯಲಾಗಿದೆ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿರೋಧಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಮಾಡಿದ್ದವು. ಈಗ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಪಕ್ಷಗಳ ನಾಟಕವನ್ನು ಜನರ ಮುಂದೆ ಬಹಿರಂಗ ಮಾಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹೈಕೋರ್ಟ್ ಇ.ಡಿ ಪ್ರಕರಣವನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿದೇಶನಾಲಯ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು ಎಂದು ನಮಗೆ ಗೊತ್ತಿರಲಿಲ್ಲ. ಇಂದು ತ್ರಿಸದಸ್ಯ ಪೀಠದ ಮುಂದೆ ವಿಚಾರಣೆ ಇದೆ ಎಂದು ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ನನಗೆ ತಿಳಿಸಿದರು. ತೀರ್ಪು ನಮ್ಮ ಪರವಾಗಿದೆ. ಇದನ್ನು ಸ್ವಾಗತಿಸುತ್ತೇವೆ ಎಂದರು.

ಹೈಕೋರ್ಟ್‍ನ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದು ಸುಪ್ರೀಂಕೋರ್ಟ್ ಕಟುವಾಗಿ ಹೇಳಿದೆ. ಇದು ನ್ಯಾಯಕ್ಕೆ ಸಂದ ಜಯ. ಸಂವಿಧಾನದ ಪ್ರಕಾರ ನ್ಯಾಯಮೂರ್ತಿಗಳು ನಮಗೆ ನ್ಯಾಯದಾನ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಕೂಡ ಪ್ರತಿಭಟನೆ ಹಾಗೂ ಇತರೆ ನಾಟಕೀಯ ನಡವಳಿಕೆಗಳು ಜನರ ಮುಂದೆ ಬಹಿರಂಗಗೊಂಡಿವೆ ಎಂದರು.‌

ನ್ಯಾಯಾಲಯಗಳು ದೇವರ ಸಮಾನ ಎಂದು ಮತ್ತೊಮ್ಮೆ ಸಾಬೀತಾಗಿವೆ. ಸುಪ್ರೀಂಕೋರ್ಟ್ ತಕ್ಕ ಪಾಠ ಕಲಿಸಿದ ಬಳಿಕವಾದರೂ ಬಿಜೆಪಿ, ಜೆಡಿಎಸ್‌ ಪಕ್ಷಗಳು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಮುಂದಿನ ದಿನಗಳಲ್ಲಿ ರಾಜಕೀಯಕ್ಕಾಗಿ ಜನರನ್ನು ದಾರಿ ತಪ್ಪಿಸುವುದನ್ನು ಬಿಡಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago