ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಇಂದು (ನ.17) ಬಿಜೆಪಿಯ 40% ಕಮಿಷನ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಮೇಲೆ 40% ಕಮೀಷನ್ ಕುರಿತು ಆರೋಪ ಮಾಡಿದ್ದರು. ಆದರೆ ಈ ಆರೋಪವೂ ಸುಳ್ಳು ಎಂದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ತಾನೂ ಏನೂ ತಪ್ಪು ಮಾಡಿಲ್ಲವೆಂದು ವಾದ ಮಾಡುತ್ತಿದ್ದರು. ಆದರೆ ಆ ಪ್ರಕರಣದ ಬಗ್ಗೆ ತನ್ನದು ಏನು ತಪ್ಪಿಲ್ಲವೆಂದು ಸಾಬೀತುಪಡಿಸುವ ಮೊದಲೇ ಮುಡಾ ಕಚೇರಿಗೆ ನಿವೇಶನಗಳನ್ನು ವಾಪಾಸ್ಸು ನೀಡಿದ್ದಾರೆ ಎಂದು ಆರೋಪಿಸಿದರು.