ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತ ವಿದ್ಯಾರ್ಥಿ ಭೂಮಿಕ್ ಅವರ ತಂದೆ ಡಿ.ಟಿ.ಲಕ್ಷ್ಮಣ ಅವರೊಂದಿಗೆ ಆರ್.ಅಶೋಕ ಮಾತನಾಡಿ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಇದಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ, ಎಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್ ಮೃತಪಟ್ಟಿದ್ದರಿಂದ ಕುಟುಂಬದವರಿಗೆ ಬಹಳ ದುಃಖವಾಗಿದೆ. ಈ ಕುಟುಂಬದವರ ಜಮೀನಿನಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಇವರ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ, ಈಗ ಒಬ್ಬನೇ ಮಗ ಮೃತಪಟ್ಟಿದ್ದು, ಆ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಎಂದರು.
ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು ಎಂದು ಭೂಮಿಕ್ ಅವರ ತಂದೆ ಹೇಳುತ್ತಿದ್ದಾರೆ. ಭೂಮಿಕ್ ಅವರ ತಂದೆ ಸಮಾಧಿಯ ಬಳಿಯೇ ದುಃಖದಿಂದ ಎರಡು ಮೂರು ದಿನ ಕಳೆದಿದ್ದಾರೆ. ಮುಂದೆ ಈ ರೀತಿಯ ಅನಾಹುತ ನಡೆಯಬಾರದು. ಕಾರ್ಯಕ್ರಮ ಮಾಡುವುದು ಬೇಡವೆಂದು ಪೊಲೀಸರು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಸೂಕ್ತವಾದ ತನಿಖೆಗೆ ಒಳಪಡಬೇಕು. ನ್ಯಾಯ ಕೊಡಿಸಲು ನಾವೆಲ್ಲರೂ ಹೋರಾಟ ಮುಂದುವರಿಸುತ್ತೇವೆ ಎಂದರು.
ಮೃತ ಭೂಮಿಕ್ ತಂದೆ ಲಕ್ಷ್ಮಣ ಮಾತನಾಡಿ, ಇಷ್ಟು ಜನಸಂದಣಿ ಇರುವಾಗ ಇಂತಹ ಕಾರ್ಯಕ್ರಮ ಮಾಡಬಾರದು ಎಂದು ಸರ್ಕಾರಕ್ಕೆ ಯಾಕೆ ಗೊತ್ತಾಗಲಿಲ್ಲ? ನಮ್ಮಂತಹವರ ಮಕ್ಕಳ ಪ್ರಾಣ ಹೋಗಿದೆ. ಸರ್ಕಾರವೇನೋ ಪರಿಹಾರ ನೀಡಿದೆ. ಆದರೆ ಆ ಹಣ ನಮ್ಮನ್ನು ನೋಡಿಕೊಳ್ಳುತ್ತದೆಯೇ? ಎಂದು ಪ್ರಶ್ನೆ ಮಾಡಿದರು.
ಆರ್.ಅಶೋಕ ಸೇರಿದಂತೆ ಎಲ್ಲ ಮುಖಂಡರು ನಮಗೆ ಸಹಾಯ ಮಾಡಿದ್ದಾರೆ. ಎಲ್ಲ ತಂದೆ ತಾಯಿಗಳಿಗೆ ಇವರು ಸ್ಪಂದಿಸಿದ್ದಾರೆ. ಘಟನೆ ನಡೆದ ಕೂಡಲೇ ಅಗತ್ಯವಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ರಾಜಕೀಯವಲ್ಲ. ಮಾನವೀಯತೆ ದೃಷ್ಟಿಯಿಂದ ಇವರು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…