Mysore
22
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

r ashok

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನು ಓದಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಕರ್ನಾಟಕದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Tags:
error: Content is protected !!