Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದತಿಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಿದ ವಿಪಕ್ಷಗಳು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ರಾಜಭವನದಲ್ಲಿ ಇಂದು(ಮಾರ್ಚ್.‌12) ಈ ಕುರಿತು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ.

ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ಸಲುವಾಗಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಜನತೆಗೆ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಅಲ್ಲದೇ ಈ ರಾಜ್ಯ ಸರ್ಕಾರಕ್ಕೆ ತಿಳಿ ಹೇಳುವ ಹಾಗು ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tags: