ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ರಾಜಭವನದಲ್ಲಿ ಇಂದು(ಮಾರ್ಚ್.12) ಈ ಕುರಿತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.
ರಾಜ್ಯಪಾಲರಿಗೆ ದೂರು ನೀಡಿದ ಬಳಿಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ಸಲುವಾಗಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅಸಂವಿಧಾನಿಕ ನಡೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಜನತೆಗೆ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ. ಅಲ್ಲದೇ ಈ ರಾಜ್ಯ ಸರ್ಕಾರಕ್ಕೆ ತಿಳಿ ಹೇಳುವ ಹಾಗು ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…