ರಾಜ್ಯ

ಸದನದ ಬಾವಿಗಿಳಿದು ವಿಪಕ್ಷಗಳಿಂದ ಪ್ರತಿಭಟನೆ: ಸಭಾಧ್ಯಕ್ಷರ ಮೇಲೆ ಪೇಪರ್‌ ಎಸೆತ

ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್‌ ಪೇಪರ್‌ ಹರಿದು ಎಸೆದಿದ್ದಾರೆ.

ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.‌21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ಸುನಿಲ್‌ ಕುಮಾರ್‌ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಸದನದಲ್ಲಿ ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್‌ ಆಗಿದೆ ಎಂಬ ಹೇಳಿಕೆ ನೀಡಿದ್ದರು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಸದನದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಅವರ ಹೇಳಿಕೆಯ ಮೇರೆಗೆ ಸರ್ಕಾರ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು. ಅವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

ಇದಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಭಾಷಣಕ್ಕೆ ಉತ್ತರ ನೀಡಲು ಪ್ರಾರಂಭಿಸಿದರು. ಆದರೆ ಈ ವೇಳೆ ವಿರೋಧ ಪಕ್ಷದ ನಾಯಕರು, ಮುಸ್ಲಿಮ್‌ರ ಶೇ.4% ಹಲಾಲ್‌ ಬಜೆಟ್‌ಯೆಂದು ಘೋಷಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಸಿಡಿ ಪ್ರದರ್ಶನ ಮಾಡಿದ್ದಾರೆ.

ಇನ್ನು ಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು. ಅಲ್ಲದೇ ಸರ್ಕಾರದ ಅನೇಕ ಮಸೂದೆಗಳಿಗೆ ಅಂಗೀಕಾರವನ್ನು ಪಡೆದುಕೊಳ್ಳಲಾಗಿದೆ. ಆದರೆ ಈ ವೇಳೆ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್‌ ಯು.ಟಿ.ಖಾದರ್‌ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದ್ದಾರೆ. ಹೀಗಾಗಿ ಸದನ ಕಲಾಪನ್ನು 10 ನಿಮಿಷ ಮುಂದಕ್ಕೆ ಹಾಕಿದರು.

ಅರ್ಚನ ಎಸ್‌ ಎಸ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

7 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

8 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

8 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

8 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago