ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ವೇತನ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.12) ಕೆಂಗಲ್ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರ ವೇತನ ಹಕ್ಕಿದೆ ಎಂಬ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಭಿಕ್ಷೆ ಬೇಡಿ ನಿಮ್ಮ ಕಾರ್ಯಕರ್ತರಿಗೆ ವೇತನವನ್ನು ನೀಡಿ. ಆದರೆ ಸರ್ಕಾರದ ಹಣವನ್ನಲ್ಲ ಎಂದು ತಿರುಗೇಟು ನೀಡಿದ್ದಾರೆ.





