ರಾಜ್ಯ

ಗ್ಯಾರಂಟಿ ಅನುಷ್ಟಾನ ಸಮಿತಿಗೆ ವಿರೋಧ: ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ವೇತನ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.12) ಕೆಂಗಲ್‌ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಪ್ರತಿಭಟನೆ ನಡೆಸಿ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸರ್ಕಾರ ವೇತನ ಹಕ್ಕಿದೆ ಎಂಬ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ಭಿಕ್ಷೆ ಬೇಡಿ ನಿಮ್ಮ ಕಾರ್ಯಕರ್ತರಿಗೆ ವೇತನವನ್ನು ನೀಡಿ. ಆದರೆ ಸರ್ಕಾರದ ಹಣವನ್ನಲ್ಲ ಎಂದು ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

4 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

5 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

5 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

6 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

12 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

12 hours ago